HomeKarnatakaಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲು: ಬಸವರಾಜ ರಾಯರೆಡ್ಡಿ

ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲು: ಬಸವರಾಜ ರಾಯರೆಡ್ಡಿ

ಕೊಪ್ಪಳ: ಮುಂಬರುವ ವಿಧಾನಸಭೆ ಲೋಕಸಭೆ, ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಯಲಬುರ್ಗಾದಲ್ಲಿ ನಡೆದ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಮರವಿಂಗಡಣೆ ಕಾರ್ಯ ನಡೆಯುವ ನಿರೀಕ್ಷೆ ಇದೆ. ಮಹಿಳೆಯರಿಗೆ ರಾಜಕೀಯವಾಗಿ ಶೇಕಡ 33 ರಷ್ಟು ಸ್ಥಾನ ನಿಗದಿ ಪಡಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಶೇಕಡ 33 ರಷ್ಟು ಸ್ಥಾನ ನೀಡುವ ಬಗ್ಗೆ ಚುನಾವಣಾ ಆಯೋಗ ಕೂಡ ಮಾಹಿತಿ ಸಂಗ್ರಹಿಸಲು ಮುಂದಾಗಿದೆ. 2026ನೇ ಸಾಲಿನಿಂದಲೇ ಮಹಿಳಾ ಮೀಸಲು ಕ್ಷೇತ್ರಗಳು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಬಸವರಾಜ ರಾಯರೆಡ್ಡಿ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular