HomeKarnatakaಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದಾಗಿನಿಂದ ನಿಯಮ ಪಾಲನೆ ಕಡ್ಡಾಯ

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದಾಗಿನಿಂದ ನಿಯಮ ಪಾಲನೆ ಕಡ್ಡಾಯ

ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಮುದ್ರಕರು ಹಾಗೂ ಕೇಬಲ್ ಆಪರೇಟರ್ ಗಳು ಚುನಾವಣಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ ಮಾಲಿಕರು, ಕೇಬಲ್ ಆಪರೇಟರ್ ಗಳೊಂದಿಗೆ ಸಭೆ ನಡೆಸಿದರು. ಚುನಾವಣಾ ಸಂಬಂಧಿ ಕರಪತ್ರಗಳು, ಪೋಸ್ಟರ್ ಗಳನ್ನು ಮುದ್ರಣ ಮಾಡುವ ಮುದ್ರಕರು ಕರಪತ್ರ, ಪೋಸ್ಟರ್ ಹಿಂಭಾಗದಲ್ಲಿ ಮುದ್ರಣ ಮಾಲೀಕರ ಸಂಪೂರ್ಣ ವಿವರ ಹಾಗೂ ಮುದ್ರಣ ಮಾಡುತ್ತಿರುವ ಪ್ರತಿಗಳ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕೆಂದು ತಿಳಿಸಿದ್ದಾರೆ.

ಮುದ್ರಣಕ್ಕೆ ಆರ್ಡರ್ ನೀಡುವವರಿಂದ ಅಪೆಂಡಿಕ್ಸ್-ಎ ರಡಿ ಅರ್ಜಿಯ ಸಂಪೂರ್ಣ ವಿವರ ಪಡೆದಿರಬೇಕು. ಮುದ್ರಣ ಮಾಡಿದ ಎರಡು ದಿನಗಳೊಳಗಾಗಿ ಮುದ್ರಕರು ಅಪೆಂಡಿಕ್ಸ್-ಬಿ ರಡಿ ಜಿಲ್ಲಾ ದಂಡಾಧಿಕಾರಿಗಳಿಗೆ ಸಲ್ಲಿಸಬೇಕು. ಪ್ಲೆಕ್ಸ್ ಸೇರಿದಂತೆ, ಪೋಸ್ಟರ್‍ ಗಳನ್ನು ಮುದ್ರಣ ಮಾಡುವಾಗ ಪ್ಲಾಸ್ಟಿಕ್ ಬಳಸಬಾರದು. ಪ್ಲೆಕ್ಸ್ ಮುದ್ರಣವನ್ನು ಇಕೋಪ್ರೆಂಡ್ಲಿ ಕ್ಲಾತ್‍ನಲ್ಲಿ ಮುದ್ರಣ ಮಾಡುವ ಮೂಲಕ 2024 ರ ಲೋಕಸಭಾ ಚುನಾವಣೆಯನ್ನು ಪ್ಲಾಸ್ಟಿಕ್ ಮುಕ್ತ ಚುನಾವಣೆಯನ್ನಾಗಿ ಮಾಡಬೇಕಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಬಲ್ ಆಪರೇಟರ್ ಗಳು ಚುನಾವಣೆಗೆ ಸಂಬಂಧಿಸಿದ ಜಾಹಿರಾತುಗಳನ್ನು ಪ್ರಸಾರ ಮಾಡುವಾಗ ಜಿಲ್ಲಾ ಎಂ.ಸಿ.ಎಂ.ಸಿ.ಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಯಾವುದೇ ವಿದ್ಯುನ್ಮಾನ ಮಾಧ್ಯಮದಲ್ಲಿ ಜಾಹಿರಾತು ಪ್ರಕಟಿಸುವಾಗ ಜಾಹಿರಾತು ವಿವರದ ಅನುವಾದಿತ ಯಥಾಪ್ರತಿಯೊಂದಿಗೆ ರಾಷ್ಟ್ರೀಯ ಪಕ್ಷ, ಅಭ್ಯರ್ಥಿಯಾಗಿದ್ದಲ್ಲಿ ಕನಿಷ್ಠ 3 ದಿನ ಮೊದಲು, ಇತರೆ ಪಕ್ಷ, ಪಕ್ಷೇತರ ಅಭ್ಯರ್ಥಿಯಾಗಿದ್ದಲ್ಲಿ 7 ದಿನ ಮೊದಲು ಅನುಬಂಧ-ಎ ಅರ್ಜಿ ರಡಿ ಸಲ್ಲಿಸಬೇಕು. ಅನುಬಂಧ.ಬಿ ರಡಿ ಅನುಮತಿ ನೀಡಲಾಗುತ್ತದೆ. ಈ ಸಮಿತಿಗೆ ಜಿಲ್ಲಾಧಿಕಾರಿಯವರು ಅಧ್ಯಕ್ಷರಾಗಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ಪ್ರಸಾರ ಮಾಡಲು ಸಹ ರಾಜಕೀಯ ಸಂಬಂಧಿ ಜಾಹೀರಾತುಗಳಿಗೆ ಅನುಮತಿ ಕಡ್ಡಾಯ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ ಹಾಗೂ ಮುದ್ರಕರಾದ ಮುರುಗೇಶಪ್ಪ.ಕೆ, ಪ್ಲೆಕ್ಸ್ ಮುದ್ರಕರ ಸಂಘದ ಅಧ್ಯಕ್ಷ ಡಿ.ಸಿ.ಶ್ರೀನಿವಾಸ್, ದಾವಣಗೆರೆ ವಿಒನ್ ಚಿದಾನಂದ ಕೆ. ಇನ್ನಿತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular