HomeIndiaಲೋಕಸಭೆ ಚುನಾವಣೆ ಎಫೆಕ್ಟ್: UPSC ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ಲೋಕಸಭೆ ಚುನಾವಣೆ ಎಫೆಕ್ಟ್: UPSC ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ(UPSC) ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆ ಮುಂದೂಡಿದೆ. ಮೇ 26ರ ಬದಲು ಜೂನ್ 16ರಂದು ಪರೀಕ್ಷೆ ನಡೆಯಲಿದೆ.

ಲೋಕಸಭೆ ಚುನಾವಣೆ ಮತದಾನದ ದಿನಾಂಕಗಳ ಘೋಷಣೆ ಆಗಿರುವುದರಿಂದ ಯುಪಿಎಸ್ಸಿ 2024ನೇ ಸಾಲಿನ ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಯನ್ನು ಜೂನ್ 16ಕ್ಕೆ ಮುಂದೂಡಿದ್ದು, ಆಯೋಗದ ಅಧಿಕೃತ ವೆಬ್ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.

2024 ರ ಮೇ 26ರಂದು ಪ್ರಿಲಿಮ್ಸ್ ಪರೀಕ್ಷೆ ನಿಗದಿಪಡಿಸಲಾಗಿತ್ತು. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ, ಮತದಾನಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಯುಪಿಎಸ್ಸಿ ಪೂರ್ವ ಭಾವಿ ಪರೀಕ್ಷೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐದು ದಿನಗಳ ನಾಗರಿಕ ಸೇವಾ ಮುಖ್ಯ ಪರೀಕ್ಷೆ ಸೆಪ್ಟೆಂಬರ್ 20ರಂದು ನಿಗದಿಯಾಗಿದ್ದು, ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಮೊದಲು ಪೂರ್ವಭಾವಿ ಪರೀಕ್ಷೆಗಳಿಗೆ ನೋಂದಣಿಯ ಗಡುವನ್ನು ಆಯೋಗ ಮಾರ್ಚ್ 6ರ ಬದಲಿಗೆ ಮಾರ್ಚ್ 13ರವರೆಗೆ ವಿಸ್ತರಿಸಿದ್ದು, 1056 ಹುದ್ದೆಗಳಿಗೆ ನಾಗರಿಕ ಸೇವಾ ಪರೀಕ್ಷೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular