HomeKarnatakaಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ನಿರ್ಮಾಪಕರ ಸಾಥ್: ಹೋಬಳಿ ಮಟ್ಟದಲ್ಲಿ ಶಿವಣ್ಣ...

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ನಿರ್ಮಾಪಕರ ಸಾಥ್: ಹೋಬಳಿ ಮಟ್ಟದಲ್ಲಿ ಶಿವಣ್ಣ ಪ್ರಚಾರ: 400 ಪ್ರಚಾರ ಸಭೆಗೆ ಪ್ಲಾನ್

ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗೆ ನಿರ್ಮಾಪಕರು ಸಾಥ್ ನೀಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಸ್ಪರ್ಧಿಸಿದ್ದು, ನಿರ್ಮಾಪಕರು ಬೆಂಬಲಿಸಿ ಇಂದು ಮಧ್ಯಾಹ್ನ 3 ಗಂಟೆಗೆ ನಟ ಶಿವರಾಜ್ ಕುಮಾರ್ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸದಲ್ಲಿ ಪ್ರೆಸ್ ಮೀಟ್ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೀತಾ ಶಿವರಾಜಕುಮಾರ್ ಅವರನ್ನು ಒಮ್ಮೆ ಸಂಸದೆಯಾಗಿ ನೋಡಬೇಕು ಎಂದು ನಟ ಶಿವಣ್ಣ ಹೇಳಿದ್ದರು. ಪತ್ನಿ ಗೀತಾ ಪರವಾಗಿ ಪ್ರಚಾರಕ್ಕೆ ಅವರು ಸಿದ್ಧವಾಗುತ್ತಿದ್ದಾರೆ. ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೋಬಳಿ ಮಟ್ಟದಲ್ಲಿ ಶಿವಣ್ಣ ಪ್ರಚಾರ ನಡೆಸಲಿದ್ದಾರೆ. ತಾಲೂಕು ಮಟ್ಟದ ಸಭೆಗಳಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆಂದು ಹೇಳಲಾಗಿದೆ.

ಗೀತಾ ಶಿವರಾಜಕುಮಾರ್ ಮಾ. 20 ರಂದು ಶಿವಮೊಗ್ಗಕ್ಕೆ ಆಗಮಿಸಿ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400 ಸಭೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular