HomeKarnatakaBIG NEWS: ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ರೆಸಾರ್ಟ್ ರಾಜಕೀಯ ಆರಂಭ

BIG NEWS: ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ರೆಸಾರ್ಟ್ ರಾಜಕೀಯ ಆರಂಭ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಚಿಕ್ಕಮಗಳೂರಿನಲ್ಲಿ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಜೆಡಿಎಸ್ ನಾಯಕರು ಎರಡು ದಿನಗಳ ಕಾಲ ಬೀಡು ಬಿಡಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಿದ್ದಾರೆ.

ಚಿಕ್ಕಮಗಳೂರಿನ ಮಲ್ಲೇನಹಳ್ಳಿಯ ಹನಿ ಡ್ಯೂ ರೆಸಾರ್ಟ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಟೀಂ 10 ರೂಂ ಬುಕ್ ಮಾಡಿದ್ದು, ಎರಡು ದಿನಗಳ ಕಾಲ ವಾಸ್ತವ್ಯ ಹೂಡಲಿದ್ದಾರೆ. ಇಂದು ರಾತ್ರಿ ಕುಮಾರಸ್ವಾಮಿ ಹಾಗೂ ಮಂಡ್ಯ ಜೆಡಿಎಸ್ ನಾಯಕರ ಟೀಂ ರೆಸಾರ್ಟ್ ಗೆ ಆಗಮಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular