HomeKarnataka2ನೇ ಹಂತದ ಲೋಕಸಭೆ ಚುನಾವಣೆ: 14 ಕ್ಷೇತ್ರಗಳಲ್ಲಿ 337 ನಾಮಪತ್ರ ಸಲ್ಲಿಕೆ

2ನೇ ಹಂತದ ಲೋಕಸಭೆ ಚುನಾವಣೆ: 14 ಕ್ಷೇತ್ರಗಳಲ್ಲಿ 337 ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯವಾಗಿದೆ. ಕೊನೆಯ ದಿನ 137 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 337 ನಾಮಪತ್ರ ಸಲ್ಲಿಕೆಯಾಗಿವೆ.

ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದೆ.

ಅಧಿಸೂಚನೆ ಪ್ರಕಟವಾದಾಗಿನಿಂದ 337 ಅಭ್ಯರ್ಥಿಗಳು 503 ನಾಮಪತ್ರ ಸಲ್ಲಿಸಿದ್ದಾರೆ. 337 ಅಭ್ಯರ್ಥಿಗಳಲ್ಲಿ 309 ಪುರುಷರು, 28 ಮಹಿಳೆಯರು ಇದ್ದಾರೆ. 14 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯಿಂದ 56, ಕಾಂಗ್ರೆಸ್ ನಿಂದ 54, ಆಮ್ ಆದ್ಮಿ ಪಕ್ಷದಿಂದ 1, ಬಿಎಸ್ಪಿ 18, ಜೆಡಿಎಸ್ ಪಕ್ಷದಿಂದ ಒಂದು ಉಮೇದುವಾರಿಕೆ ಸಲ್ಲಿಕೆಯಾಗಿದೆ. ಮಾನ್ಯತೆ ಪಡೆದ ನೋಂದಾಯಿತ ರಾಜಕೀಯ ಪಕ್ಷಗಳಿಂದ 143, ಪಕ್ಷೇತರರಿಂದ 230 ನಾಮಪತ್ರ ಸಲ್ಲಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೀದರ್, ಬಾಗಲಕೋಟೆ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular