HomeKarnatakaನಾಳೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ನಾಳೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಏಪ್ರಿಲ್ 5 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಿಸಲಾಗುವುದು.

ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತ, ಮೇ 7 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ –ಚಿಕ್ಕಮಗಳೂರು

ಚಿಕ್ಕಬಳ್ಳಾಪುರ

ದಕ್ಷಿಣ ಕನ್ನಡ

ಚಿತ್ರದುರ್ಗ

ತುಮಕೂರು

ಹಾಸನ

ಮಂಡ್ಯ

ಚಾಮರಾಜನಗರ

ಮೈಸೂರು -ಕೊಡಗು

ಕೋಲಾರ

ಬೆಂಗಳೂರು ಗ್ರಾಮಾಂತರ

ಬೆಂಗಳೂರು ಕೇಂದ್ರ

ಬೆಂಗಳೂರು ದಕ್ಷಿಣ

ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಇವುಗಳಲ್ಲಿ ಚಾಮರಾಜನಗರ, ಕೋಲಾರ, ಚಿತ್ರದುರ್ಗ ಎಸ್ಸಿ ಮೀಸಲು ಕ್ಷೇತ್ರಗಳಾಗಿದ್ದು, ಉಳಿದವು ಸಾಮಾನ್ಯ ಕ್ಷೇತ್ರಗಳಾಗಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular