HomeKarnatakaರಾಜ್ಯದಲ್ಲಿ ಮಾ. 15ರಿಂದ ಲೋಕಸಭೆ ಚುನಾವಣೆಗೆ ಮೋದಿ ಭರ್ಜರಿ ಪ್ರಚಾರ

ರಾಜ್ಯದಲ್ಲಿ ಮಾ. 15ರಿಂದ ಲೋಕಸಭೆ ಚುನಾವಣೆಗೆ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 15 ರಿಂದ ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಮಾರ್ಚ್ 15ರಿಂದ ರಾಜ್ಯದಲ್ಲಿ ಮೋದಿ ಪ್ರಚಾರ ಆರಂಭವಾಗಲಿದೆ. ಮಾರ್ಚ್ 15 ರಂದು ಬೆಳಗ್ಗೆ 10 ಗಂಟೆಗೆ ದೇವನಹಳ್ಳಿಗೆ ಆಗಮಿಸಲಿರುವ ಪ್ರಧಾನಿ ನಂತರ ಚಿಕ್ಕಬಳ್ಳಾಪುರಕ್ಕೆ ತೆರಳಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಮಾರ್ಚ್ 16ರಂದು ಕಲಬುರಗಿಯಲ್ಲಿ ಬಹಿರಂಗ ಸಭೆ, ಮಾರ್ಚ್ 17ರಂದು ಶಿವಮೊಗ್ಗದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸುವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾ 17 ರಂದು ಬೆಳಗ್ಗೆ ಕೇರಳದಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದಾರೆ. ನಂತರ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ –ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಕ್ಷೇತ್ರ ವ್ಯಾಪ್ತಿಗೆ ಶಿವಮೊಗ್ಗದಲ್ಲಿ ಸಮಾವೇಶ ನಿಗದಿ ಮಾಡಲಾಗಿದೆ. ಶಿವಮೊಗ್ಗ, ಕೋಲಾರ, ಬೀದರ್, ಧಾರವಾಡದಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular