BREAKING: 48 ಗಂಟೆ ಚುನಾವಣೆ ಪ್ರಚಾರ ನಡೆಸದಂತೆ ಮಾಜಿ ಸಿಎಂಗೆ ನಿರ್ಬಂಧಿಸಿದ ಆಯೋಗ

ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರ ನಡೆಸಿದಂತೆ ತೆಲಂಗಾಣ ಸಿಎಂ ಕೆಸಿಆರ್‌ ಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. 48 ಗಂಟೆಗಳ ಕಾಲ ಪ್ರಚಾರದಲ್ಲಿ ಭಾಗವಹಿಸಿದಂತೆ ನಿರ್ಬಂಧ ವಿಧಿಸಲಾಗಿದೆ.

ಅವರು ಕಾಂಗ್ರೆಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ 48 ಗಂಟೆಗಳ ಕಾಲ ಪ್ರಚಾರ ನಡೆಸುವಂತಿಲ್ಲ ಎಂದು ಹೇಳಲಾಗಿದೆ.

ಭಾರತದ ಚುನಾವಣಾ ಆಯೋಗವು ತೆಲಂಗಾಣ ಮಾಜಿ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರ ಮೇಲೆ 48 ಗಂಟೆಗಳ ನಿಷೇಧವನ್ನು ವಿಧಿಸಿದೆ. ಮೇ 1 ರಂದು ರಾತ್ರಿ 8 ಗಂಟೆಯಿಂದ ಇದು ಜಾರಿಗೆ ಬರಲಿದೆ. ಸಿರ್ಸಿಲ್ಲಾದಲ್ಲಿ ಪ್ರಚಾರ ಸಭೆಯೊಂದರಲ್ಲಿ ರಾವ್ ಅವರು ಕಾಂಗ್ರೆಸ್ ವಿರುದ್ಧ ಮಾಡಿದ “ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳಿಗೆ” ಪ್ರತಿಕ್ರಿಯೆಯಾಗಿ ಪ್ರಚಾರಕ್ಕೆ ನಿಷೇಧ ಹೇರಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read