HomeKarnatakaBIG NEWS: ಲೋಕಸಭಾ ಚುನಾವಣೆ: ಚುನಾವಣಾ ಸಿಬ್ಬಂದಿಗಳಿಂದ ಅಂಚೆ ಮತದಾನ

BIG NEWS: ಲೋಕಸಭಾ ಚುನಾವಣೆ: ಚುನಾವಣಾ ಸಿಬ್ಬಂದಿಗಳಿಂದ ಅಂಚೆ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಇಂದು ಚುನವಣಾ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತಗಟ್ಟೆಗೆ ತೆರಳುವ ಮುನ್ನ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮಸ್ಟರಿಂಗ್ ಕೇಂದ್ರಗಳಲ್ಲಿ ಚುನವಣಾ ಸಿಬ್ಬಂದಿಗಳು ಅಂಚೆ ಮತದಾನದ ಮೂಲಕ ಮತ ಚಲಾಯಿಸಿದ್ದಾರೆ. ಆಯಾ ಮತಗಟ್ಟೆಗಳಿಗೆ ತೆರಳುವ ಮುನ್ನ ಮತದಾನ ಮಾಡಿ ತೆರಳುವಂತೆ ಚುನವಣಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಚುನಾವಣಾ ಸಿಬ್ಬಂದಿಗಳಿಗಾಗಿಯೇ ಪ್ರತ್ಯೇಕ ಕೊಠಡಿ ಸ್ಥಾಪಿಸಿ ಅಂಚೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಬಂದು ಮತದಾನ ಮಾಡುತ್ತಿದ್ದ ದೃಶ್ಯ ಗಮನ ಸೆಳೆಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular