HomeKarnatakaಲೋಕಸಭೆ ಚುನಾವಣೆ : ನಾಳೆಯಿಂದ ರಾಜ್ಯದಲ್ಲಿ 'ಪ್ರಧಾನಿ ಮೋದಿ' ಪ್ರಚಾರ ಆರಂಭ

ಲೋಕಸಭೆ ಚುನಾವಣೆ : ನಾಳೆಯಿಂದ ರಾಜ್ಯದಲ್ಲಿ ‘ಪ್ರಧಾನಿ ಮೋದಿ’ ಪ್ರಚಾರ ಆರಂಭ

ಬೆಂಗಳೂರು : ಲೋಕಸಭೆ ಚುನಾವಣೆಗೆ ನಾಳೆ ದಿನಾಂಕ ಘೋಷಣೆಯಾಗಲಿದ್ದು, ಇದರ ನಡುವೆ ಪ್ರಧಾನಿ ಮೋದಿ ನಾಳೆಯಿಂದ ಕರ್ನಾಟಕದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾರ್ಚ್ 16, 18ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಕಲಬುರಗಿ, ಶಿವಮೊಗ್ಗದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಮಾರ್ಚ್ 16ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಎನ್.ವಿ. ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.17ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.17ರ ಮಧ್ಯಾಹ್ನ 2 ಗಂಟೆಗೆ ಕೇರಳದಿಂದ ನೇರವಾಗಿ ವಿಶೇಷ ಫ್ಲೈಟ್ನಲ್ಲಿ ಆಗಮಿಸಲಿದ್ದು ಶಿವಮೊಗ್ಗದ ಫ್ರೀಡಂಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 15 ಮತ್ತು 19 ರ ನಡುವೆ ಕೋಲಾರ, ಶಿವಮೊಗ್ಗ, ಬೀದರ್ ಮತ್ತು ಧಾರವಾಡದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಪ್ರಧಾನಿಯವರು ಇದೇ ಅವಧಿಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಇತರ ರ್ಯಾಲಿಗಳನ್ನು ಕೂಡ ನಡೆಸಲಿದ್ದಾರೆ. ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಹಲವು ನಾಯಕರು ಕೂಡ ಆಗಮಿಸಲಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular