ಲೋಕಸಭೆ ಚುನಾವಣೆ ; ನಾಳೆಯಿಂದ ಅಂಚೆ ಮೂಲಕ ಹಿರಿಯ ನಾಗರಿಕರ ಮತದಾನ ಆರಂಭ..!

ಬೆಂಗಳೂರು : ಮತದಾರರ ಪಟ್ಟಿಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಮನೆಯಿಂದ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಏ..13ರಿಂದ 18ರವರೆಗೆ ಮನೆಯಿಂದ ಅಂಚೆ ಮತದಾನ ನಡೆಯಲಿದೆ.

6,312 ಮುಂದಿ ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರು ಮನೆಯಿಂದ ಮತದಾನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಮತದಾರರ ಪಟ್ಟಿಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಮನೆಯಿಂದ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.ಅಧಿಕಾರಿಗಳ ತಂಡ ಅರ್ಜಿ ಸಲ್ಲಿಕೆ ಮಾಡಿದ ಪ್ರತಿ ಮತದಾರರ ಮನೆಗೆ ತೆರಳಿ ಮತದಾರರಿಂದ ಅಂಚೆ ಮತದಾನ ಪಡೆಯಲಿದ್ದಾರೆ.

ನಗರದಲ್ಲಿ ಒಟ್ಟು 95,128 ಹಿರಿಯ ನಾಗರಿಕರು ಹಾಗೂ 221,322 ಅಂಗವಿಕಲರು ಸೇರಿದಂತೆ ಒಟ್ಟು 1,17,350 ಮತದಾರರಿಗೆ ಮನೆಯಿಂದ ಅಂಚೆ ಮತದಾನಕ್ಕೆ ಆರ್ಹತೆ ಹೊಂದಿದ್ದಾರೆ. ಮನೆಯಿಂದ ಅಂಚೆ ಮತದಾನ ಮಾಡುವುದಕ್ಕೆ 12ಡಿ ಅರ್ಜಿ ಸಲ್ಲಿಕೆ ಮಾಡಿದ ಮತದಾರರು ನಿಗದಿತ ದಿನಾಂಕದಲ್ಲಿ ಮನೆಯಿಂದಲೇ ಅಂಚೆ ಮತದಾನ ಮಾಡಬೇಕು. ಒಂದು ವೇಳೆ ಮನೆಯಿಂದ ಅಂಚೆನೋಂದಣಿ ಮಾಡಿಸಿದವರಿಗೆ ಮತಗಟ್ಟೆಯಲ್ಲಿ ಅವಕಾಶವಿಲ್ಲ. ಅಂಚೆ ಮತದಾನ ಸಾಧ್ಯವಾಗಿಲ್ಲ ಎಂದು ಸಾರ್ವತ್ರಿಕ ಮತದಾನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡುವುದಕ್ಕೆ ಯಾವುದಕ್ಕೂ ಅವಕಾಶ ಇಲ್ಲ ಎಂದು ಹೇಳಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read