HomeKarnatakaಲೋಕಸಭೆ ಚುನಾವಣೆಯಲ್ಲಿ NDAಗೆ 411 ಸ್ಥಾನ, ಕರ್ನಾಟಕದಲ್ಲಿ 25 ಕ್ಷೇತ್ರದಲ್ಲಿ ಗೆಲುವು

ಲೋಕಸಭೆ ಚುನಾವಣೆಯಲ್ಲಿ NDAಗೆ 411 ಸ್ಥಾನ, ಕರ್ನಾಟಕದಲ್ಲಿ 25 ಕ್ಷೇತ್ರದಲ್ಲಿ ಗೆಲುವು

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 411 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಿಎನ್ಎನ್ ನ್ಯೂಸ್ 18 ನಡೆಸಿದ ಚುನಾವಣೆ ಪೂರ್ವ ಸಮೀಕ್ಷೆ ಹೇಳಿದೆ.

543 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ 411 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಇಂಡಿಯಾ ಮೈತ್ರಿಕೂಟ 105 ಸ್ಥಾನ ಪಡೆಯಲಿದ್ದು, ಇತರರು 27 ಸ್ಥಾನ ಗಳಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370, ಎನ್.ಡಿ.ಎ. ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಿವೆ.

ಕರ್ನಾಟಕದ ಒಟ್ಟು 28 ಕ್ಷೇತ್ರಗಳಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿಕೂಟ 25 ಸ್ಥಾನ ಪಡೆಯಲಿವೆ. ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಿಎನ್ಎನ್ ನ್ಯೂಸ್ 18 ಸಮೀಕ್ಷೆ ತಿಳಿಸಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಪ್ರಸ್ತುತ ಬಿಜೆಪಿ 25, ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರ ಒಬ್ಬರು ಸದಸ್ಯರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular