HomeKarnataka2ನೇ ಹಂತ: 45 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್: 227 ಮಂದಿ ಕಣದಲ್ಲಿ

2ನೇ ಹಂತ: 45 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್: 227 ಮಂದಿ ಕಣದಲ್ಲಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾದ ಸೋಮವಾರ 45 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ಪಡೆದುಕೊಂಡಿದ್ದಾರೆ. ಕಣದಲ್ಲಿ 227 ಮಂದಿ ಇದ್ದಾರೆ.

ಈ 14 ಕ್ಷೇತ್ರಗಳಿಗೆ 335 ಅಭ್ಯರ್ಥಿಗಳು 503 ನಾಮಪತ್ರ ಸಲ್ಲಿಸಿದ್ದರು. ಶನಿವಾರ ನಾಮಪತ್ರ ಪರಿಶೀಲಿಸಿದಾಗ 272 ಅಭ್ಯರ್ಥಿಗಳ 394 ನಾಮಪತ್ರ ಕ್ರಮಬದ್ಧವಾಗಿದ್ದು, 109 ನಾಮಪತ್ರ ತಿರಸ್ಕೃತಗೊಂಡಿವೆ. 45 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. 216 ಪುರುಷರು, 21 ಮಹಿಳೆಯರು ಸೇರಿ 257 ಮಂದಿ ಕಣದಲ್ಲಿ ಉಳಿದಿದ್ದಾರೆ.

ದಾವಣಗೆರೆಯಲ್ಲಿ 30 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ. ವಿಜಯಪುರ, ರಾಯಚೂರು ಕ್ಷೇತ್ರದಲ್ಲಿ ತಲಾ 8 ಮಂದಿ ಕಣದಲ್ಲಿದ್ದಾರೆ. 14 ಕ್ಷೇತ್ರಗಳಲ್ಲಿ 21 ಮಹಿಳಾ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಬೆಳಗಾವಿ, ಬೀದರ್, ಬಳ್ಳಾರಿ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗಳು ಕಣದಲ್ಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular