HomeKarnatakaಮೊದಲ ಹಂತದ ಚುನಾವಣೆ 14 ಲೋಕಸಭಾ ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು

ಮೊದಲ ಹಂತದ ಚುನಾವಣೆ 14 ಲೋಕಸಭಾ ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. 14 ಕ್ಷೇತ್ರಗಳಲ್ಲಿ ಕಾಂಗ್ರೆಸ್, 11 ಕ್ಷೇತ್ರಗಳಲ್ಲಿ ಬಿಜೆಪಿ, 3 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 226 ಪುರುಷರು, 21 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 247 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು 29 ಅಭ್ಯರ್ಥಿಗಳಿದ್ದು, ದಕ್ಷಿಣ ಕನ್ನಡದಲ್ಲಿ 9 ಮಂದಿ ಸ್ಪರ್ಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಯದುವೀರ್ ಒಡೆಯರ್, ಡಾ.ಸಿ.ಎನ್. ಮಂಜುನಾಥ್, ಡಿ.ಕೆ. ಸುರೇಶ್, ಕೆ. ಸುಧಾಕರ್ ಸೇರಿದಂತೆ ಹಲವು ಪ್ರಮುಖರು ಮೊದಲ ಹಂತದ ಚುನಾವಣೆಯಲ್ಲಿ ಕಣದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular