HomeIndiaBIG NEWS: ಇನ್ನು 5 ದಿನದಲ್ಲಿ ಮಾ. 14/15 ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ

BIG NEWS: ಇನ್ನು 5 ದಿನದಲ್ಲಿ ಮಾ. 14/15 ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ

ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಮಾರ್ಚ್ 14 ರಂದು ಗುರುವಾರ ಅಥವಾ ಮಾರ್ಚ್ 15ರ ಶುಕ್ರವಾರ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ಲೋಕಸಭೆ ಚುನಾವಣೆಯ ಸಿದ್ಧತೆ ಪರಿಶೀಲಿಸಲು ಚುನಾವಣಾ ಆಯೋಗ ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಬುಧವಾರ ವಾಪಸ್ಸಾಗಲಿದ್ದು, ಇದಾದ ನಂತರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮಾರ್ಚ್ 13ರ ಬುಧವಾರದೊಳಗೆ ವಿವಿಧ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಲು ಕೇಂದ್ರದ ವಿವಿಧ ಸಚಿವಾಲಯಗಳು ಕ್ರಮ ಕೈಗೊಂಡಿವೆ. ಚುನಾವಣೆ ಘೋಷಣೆಯಾದ ಕೂಡಲೇ ಮಾದರಿ ನೀತಿ ಸಮಿತಿ ಜಾರಿಗೆ ಬರುವುದರಿಂದ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಕ್ರಮ ಮಾಡಲು ಅವಕಾಶ ಇರುವುದಿಲ್ಲ. ಹೀಗಾಗಿ ಕಾಮಗಾರಿಗಳಿಗೆ ತರಾತುರಿ ಚಾಲನೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊನೆಯದಾಗಿ ಚುನಾವಣಾ ಆಯೋಗ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಬಹುತೇಕ ಮಾರ್ಚ್ 14 ಅಥವಾ 15ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular