ಶುಕ್ರವಾರ ಮೊದಲ ಹಂತದ ಚುನಾವಣೆ: 102 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ನವದೆಹಲಿ: ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದ್ದು, 102 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ.

ನಾಳೆ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಏಪ್ರಿಲ್ 19 ರ ಶುಕ್ರವಾರದಂದು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣಾ ಪ್ರಚಾರವು ಬುಧವಾರ ಮಧ್ಯಾಹ್ನ 3 ಗಂಟೆಗೆ ಈಶಾನ್ಯದಲ್ಲಿ ಮುಕ್ತಾಯಗೊಂಡಿತು. ಇತರ ಪ್ರದೇಶಗಳಲ್ಲಿ ಸಂಜೆ 6 ಗಂಟೆಗೆ ಮುಕ್ತಾಯವಾಯಿತು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.

543 ಲೋಕಸಭಾ ಸ್ಥಾನಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read