HomeIndiaBREAKING: 1,88,350 ಮತಗಳಿಂದ ಮುನ್ನಡೆ ಗಳಿಸಿದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

BREAKING: 1,88,350 ಮತಗಳಿಂದ ಮುನ್ನಡೆ ಗಳಿಸಿದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ವಿಧಿಶಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಿಂಗ್ ಚೌಹಾಣ್ 1,88,350 ಮತಗಳಿಂದ ಮುನ್ನಡೆ ಸಾಧಿಸಿದ್ದು, ಮತ ಎಣಿಕೆ ಕಾರ್ಯ ಮುಂದುವರೆದಿದೆ.

ಹರಿಯಾಣ ಮಾಜಿ ಮುಖ್ಯಮಂತ್ರಿ ಕರ್ನಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನೋಹರ್ ಲಾಲ್ ಖಟ್ಟರ್ 28,481 ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ.

ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ 4948 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ಹಿನ್ನಡೆ ಅನುಭವಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಲ್. ಶರ್ಮಾ 19,177 ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಟಿ ಕಂಗನಾ ರನೌತ್ 30,000 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ 1,20,000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular