HomeKarnatakaಏ. 20 ರಂದು ರಾಜ್ಯದಲ್ಲಿ ಮತ್ತೆ ಮೋದಿ ಭರ್ಜರಿ ಪ್ರಚಾರ: ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಸಮಾವೇಶ

ಏ. 20 ರಂದು ರಾಜ್ಯದಲ್ಲಿ ಮತ್ತೆ ಮೋದಿ ಭರ್ಜರಿ ಪ್ರಚಾರ: ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಸಮಾವೇಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಏಪ್ರಿಲ್ 20ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಏಪ್ರಿಲ್ 20ರಂದು ಮಧ್ಯಾಹ್ನ 3:30ಕ್ಕೆ ಚಿಕ್ಕಬಳ್ಳಾಪುರದಲ್ಲಿ, ಸಂಜೆ 5:30ಕ್ಕೆ ಬೆಂಗಳೂರಿನಲ್ಲಿ ಸಮಾವೇಶ ನಡೆಯಲಿದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಕಾರ್ಯಕರ್ತರು, ಸಾರ್ವಜನಿಕರು ಚಿಕ್ಕಬಳ್ಳಾಪುರದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸುವರು ಎಂದು ಬಿಜೆಪಿ ಶಾಸಕ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯುವ ಚಿತ್ರದುರ್ಗ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೂಡ ಮೋದಿ ಪ್ರಚಾರ ಕೈಗೊಳ್ಳಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular