HomeKarnatakaಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್

ಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು, ರಾಜ್ಯದ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಮುಕ್ತಾಯವಾಗಿದೆ.

ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಿಗೆ ಮತದಾನಕ್ಕೆ ತೆರಳುವವರಿಗೆ ಬಸ್ ಟಿಕೆಟ್ ದರ ಏರಿಕೆ ಬಿಸಿ ತಟ್ಟಿದೆ. ಹಬ್ಬಗಳ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಟಿಕೆಟ್ ದರ ಹೆಚ್ಚಿಸುವುದು ಸಾಮಾನ್ಯ. ಈಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಕೆಲಸ ಸೇರಿದಂತೆ ನಾನಾ ಕಾರಣಗಳಿಂದ ಉತ್ತರ ಕರ್ನಾಟಕದ ಜನ ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ನೆಲೆಸಿದ್ದು, ಮತದಾನ ಮಾಡಲು ಊರಿಗೆ ಮರಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗೆ ಬೆಂಗಳೂರು, ಮಂಗಳೂರು ಸೇರಿ ವಿವಿಧೆಡೆಯಿಂದ ಬರುವ ಮತದಾರರಿಗೆ ಬಸ್ ಟಿಕೆಟ್ ದರ ಏರಿಕೆ ಬಿಸಿ ತಟ್ಟಿದೆ. ಸಾಮಾನ್ಯವಾಗಿ 700- 800 ರೂ. ಇದ್ದ ಖಾಸಗಿ ಬಸ್ ಟಿಕೆಟ್ ದರ ದುಪಟ್ಟಾಗಿದೆ. ಬೆಂಗಳೂರು -ಗದಗ ಮಧ್ಯೆ ಸಾಮಾನ್ಯ ದಿನಗಳಲ್ಲಿ ಖಾಸಗಿ ಬಸ್ ಗಳು 600 ರಿಂದ 800ರೂ.ವರೆಗೂ ಟಿಕೆಟ್ ದರ ವಿಧಿಸುತ್ತವೆ. ಮೇ 6ರ ಟಿಕೆಟ್ ದರ 1250 ರೂ.ನಿಂದ 1400 ರೂ.ವರೆಗೆ ಹೆಚ್ಚಳವಾಗಿದೆ.

ಬೀದರ್, ಯಾದಗಿರಿ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ ಮೊದಲಾದ ನಗರಗಳಿಗೆ 2500 ರೂ. ವರೆಗೂ ಟಿಕೆಟ್ ದರ ಏರಿಕೆ ಮಾಡಿರುವುದರಿಂದ ಮತದಾನ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಚುನಾವಣಾ ಆಯೋಗ, ಸ್ವೀಪ್ ಸಮಿತಿ ಮತದಾನ ಹೆಚ್ಚಳಕ್ಕೆ ಅನೇಕ ಕಾರ್ಯಕ್ರಮ ಕೈಗೊಂಡು ಜಾಗೃತಿ ಮೂಡಿಸುತ್ತಿವೆ. ದೂರದ ಊರುಗಳಿಂದ ಮತದಾನ ಮಾಡಲು ಬರುವವರಿಗೆ ಬಸ್ ಪ್ರಯಾಣದ ದುಬಾರಿಯಾಗದಂತೆ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿಬಂದಿದೆ.

ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಆಯಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರಿಗೆ ರಜೆ ಕೂಡ ನೀಡಲಾಗಿದೆ. ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ. ಈಗಾಗಲೇ ಬಹುತೇಕ ಬಸ್ ಗಳ ಮುಂಗಡ ಟಿಕೆಟ್ ಭರ್ತಿಯಾಗಿವೆ. ಖಾಸಗಿ ಬಸ್ ಗಳಲ್ಲಿ ದುಬಾರಿ ದರ ವಿಧಿಸಿರುವುದರಿಂದ ಕೆಲವರು ಮತದಾನದಿಂದ ದೂರ ಉಳಿಯುವ ಸಾಧ್ಯತೆ ಕೂಡ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular