HomeKarnatakaಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಕೋಲಾರ ಮತ್ತು ಮಂಡ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ನಂತರ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿಯೂ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ.

ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮನೆಮನೆಗೆ ತಲುಪಿಸಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ. ರಾಜ್ಯದ ಪ್ರತಿ ಪ್ರಜೆಯೂ ಗ್ಯಾರಂಟಿ ಯೋಜನೆಗಳ ಲಾಭ ಪಡೆದಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular