HomeIndiaವರುಣ್ ಗಾಂಧಿಗೆ ಬಿಜೆಪಿ ಶಾಕ್: ನಟಿ ಕಂಗನಾಗೆ ಲೋಕಸಭೆ ಚುನಾವಣೆ ಟಿಕೆಟ್

ವರುಣ್ ಗಾಂಧಿಗೆ ಬಿಜೆಪಿ ಶಾಕ್: ನಟಿ ಕಂಗನಾಗೆ ಲೋಕಸಭೆ ಚುನಾವಣೆ ಟಿಕೆಟ್

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ 5ನೇ ಪಟ್ಟಿ ಪ್ರಕಟಿಸಿದೆ. 111 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.

ಸಂಸದ ವರುಣ್ ಗಾಂಧಿಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ವರುಣ್ ಗಾಂಧಿ ಪ್ರತಿನಿಧಿಸುತ್ತಿರುವ ಫಿಲಿಬಿಟ್ ಕ್ಷೇತ್ರಕ್ಕೆ ಉತ್ತರ ಪ್ರದೇಶ ಸಚಿವ ಜಿತಿನ್ ಪ್ರಸಾದ್ ಅವರ ಹೆಸರು ಘೋಷಣೆ ಮಾಡಲಾಗಿದೆ. ಮೇನಕಾ ಗಾಂಧಿ ಸುಲ್ತಾನ್ ಪುರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ‘ರಾಮಾಯಣ’ ಧಾರವಾಹಿಯಲ್ಲಿ ಶ್ರೀ ರಾಮನ ಪಾತ್ರ ಮಾಡಿದ್ದ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸಲಿದ್ದಾರೆ. ಅರುಣ್ ಗೋವಿಲ್ ಗೆ ಮೀರಠ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೆ ಸಂಬಲ್ಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular