BIG NEWS: ಸುದೀರ್ಘ 7 ಹಂತಗಳಲ್ಲಿ ನಡೆದ ಪ್ರಜಾಪ್ರಭುತ್ವದ ಹಬ್ಬ ಲೋಕಸಭೆ ಚುನಾವಣೆ ಮುಕ್ತಾಯ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ಸುದೀರ್ಘ 7 ಹಂತಗಳಲ್ಲಿ ಮತದಾನ ನಡೆದಿತ್ತು. ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ ನಡೆದಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯೋಗ 18ನೇ ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮಾರ್ಚ್ 16ರಂದು ವೇಳಾಪಟ್ಟಿ ಪ್ರಕಟಿಸುವುದರೊಂದಿಗೆ ಚುನಾವಣಾ ಸಂಭ್ರಮ ರಂಗೇರಿತ್ತು. ಎರಡೂವರೆ ತಿಂಗಳು ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆದಿದೆ.

ಪ್ರಮುಖವಾಗಿ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರದಲ್ಲಿ 7 ಹಂತಗಳಲ್ಲಿ ಮತದಾನ ನಡೆದಿತ್ತು. ಮಹಾರಾಷ್ಟ್ರ ಮತ್ತು ಜಮ್ಮು -ಕಾಶ್ಮೀರದಲ್ಲಿ ಐದು ಹಂತ, ಮಧ್ಯಪ್ರದೇಶ, ಒಡಿಶಾ, ಜಾರ್ಖಂಡ್ ನಲ್ಲಿ 4 ಹಂತ, ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆದಿತ್ತು. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ಳರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.

10.54 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.. 1.5 ಕೋಟಿ ಚುನಾವಣಾ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯನ್ನು ಬಳಕೆ ಮಾಡಿಕೊಂಡಿದ್ದು, ದೇಶಾದ್ಯಂತ 55 ಲಕ್ಷ ಇವಿಎಂ ಬಳಸಲಾಗಿದೆ. ಚುನಾವಣಾ ಪ್ರಕ್ರಿಯೆಗಾಗಿ ಸುಮಾರು 4 ಲಕ್ಷಗಳ ವಾಹನ ಬಳಕೆಯಾಗಿದೆ. ಇಡೀ ವಿಶ್ವವೇ ಅತ್ಯಂತ ಕುತೂಹಲದಿಂದ ಭಾರತದ ಚುನಾವಣೆಯನ್ನು ಗಮನಿಸಿದೆ.

ಮೊದಲ ಹಂತದ ಮತದಾನವು ಏಪ್ರಿಲ್ 19 ರಂದು ನಡೆಯಿತು, ಇದರಲ್ಲಿ 102 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು 88 ಸ್ಥಾನಗಳಲ್ಲಿ ಮತದಾರರು ತಮ್ಮ ಹಕ್ಕುಗಳನ್ನು ಚಲಾಯಿಸಿದ್ದರು. 11 ರಾಜ್ಯಗಳಲ್ಲಿ 93 ಸ್ಥಾನಗಳೊಂದಿಗೆ ಮೂರನೇ ಹಂತದ ಮತದಾನವು ಮೇ 7 ರಂದು, ಮೇ 13 ರಂದು ನಾಲ್ಕನೇ ಹಂತ, ಮೇ 20ರಂದು 5ನೇ ಹಂತ, ಮೇ 25 ರಂದು 6ನೇ ಹಂತ ಪೂರ್ಣಗೊಂಡಿತ್ತು. ಎಲ್ಲಾ ಸ್ಥಾನಗಳ ಫಲಿತಾಂಶಗಳನ್ನು ಜೂನ್ 4 ರಂದು ಘೋಷಿಸಲಾಗುತ್ತದೆ.

ಮೊದಲ ಹಂತದಲ್ಲಿ ಶೇ.66.14ರಷ್ಟು ಮತದಾನವಾಗಿದ್ದು, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನವಾಗಿದೆ. ಮೂರನೇ, ನಾಲ್ಕನೇ, ಐದನೇ ಮತ್ತು ಆರನೇ ಹಂತಗಳಲ್ಲಿ ಕ್ರಮವಾಗಿ ಶೇ.65.68, ಶೇ.69.16, ಶೇ.62.20 ಮತ್ತು ಶೇ.63.37ರಷ್ಟು ಮತದಾನವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read