ಸಂಸತ್ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷರಾಗಿ ಕೆ.ಸಿ. ವೇಣುಗೋಪಾಲ್

ನವದೆಹಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆ.ಸಿ. ವೇಣುಗೋಪಾಲ್ ಅವರನ್ನು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಂಸತ್ತಿನ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಸೇರಿ ಒಟ್ಟು ಐದು ಸಮಿತಿಗಳನ್ನು ರಚಿಸಿದ್ದಾರೆ. ಲೋಕಸಭೆ ಸಚಿವಾಲಯದಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ.

ಸಾರ್ವಜನಿಕ ಲೆಕ್ಕಪತ್ರ, ಸಾರ್ವಜನಿಕ ಉದ್ಯಮ ಮತ್ತು ಅಂದಾಜು ಸಮಿತಿಗಳು, ಸರ್ಕಾರದ ಲೆಕ್ಕಪತ್ರಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಕಾರ್ಯ ಚಟುವಟಿಕೆಗಳ ಮೇಲೆ ನಿಗಾ ಇಡುವಂತಹ ಸಂಸತ್ತಿನ ಪ್ರಮುಖ ಮೂರು ಹಣಕಾಸು ಸಮಿತಿಗಳಾಗಿವೆ.

ಅಂದಾಜು ಸಮಿತಿಗೆ ಮುಖ್ಯಸ್ಥರಾಗಿ ಬಿಜೆಪಿಯ ಸಂಜಯ್ ಜೈಸ್ವಾಲ್, ಸಾರ್ವಜನಿಕ ಉದ್ಯಮಗಳ ಸಮಿತಿಗೆ ಬಿಜೆಪಿಯ ಬೈಜಯಂತ್ ಪಾಂಡಾ ಅವರನ್ನು ನೇಮಕ ಮಾಡಲಾಗಿದೆ.

ಇತರೆ ಹಿಂದುಳಿದ ವರ್ಗಗಳ(OBC) ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಬಿಜೆಪಿಯ ಗಣೇಶ್ ಸಿಂಗ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಫಗ್ಗನ್ ಸಿಂಗ್ ಕುಲಸ್ತೆ ಅವರನ್ನು ನೇಮಕ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read