ಬೆಂಗಳೂರು: ಲೋಕಭವನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಐಇಡಿ ಬಾಂಬ್ ಮೂಲಕ ಲೋಕಭವನವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ.
ರಾಜ್ಯಪಾಲರ ಅಧಿಕೃತ ಇ-ಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಜನವರಿ 14ರಂದು ಈ ಸಂದೇಶ ಬಂದಿದ್ದು, ಮಧ್ಯಾಹ್ನದೊಳಗೆ ಲೋಕಭವನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಐಇಡಿ ಆರ್ ಡಿಎಕ್ಸ್ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. [email protected] ಇ-ಮೇಲ್ ಐಡಿಯಿಂದ ಈ ಸಂದೇಶ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ತಪಾಸಣೆ ಬಳಿಕ ಇದೊಂದು ಹುಸಿಬಾಂಬ್ ಕರೆ ಎಂದು ದೃಢಪಟ್ಟಿದೆ. ಈ ಬಗ್ಗೆ ಲೋಕಭವನ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

