HomeKarnatakaBIG NEWS: ಚಿನ್ನ ಖರೀದಿಸಲೆಂದು ತಂದ ಹಣವನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು; 1.5 ಲಕ್ಷ ನಗದು...

BIG NEWS: ಚಿನ್ನ ಖರೀದಿಸಲೆಂದು ತಂದ ಹಣವನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು; 1.5 ಲಕ್ಷ ನಗದು ಜಪ್ತಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದೆ. ದಾಖಲೆ ಇಲ್ಲದೇ ಸಾಗಿಸುವ ಅಕ್ರಮ ಹಣ, ವಸ್ತುಗಳ ಮೇಲೆ ನಿಗಾ ವಹಿಸಿರುವ ಚುನಾವಣಾ ಅಧಿಕಾರಿಗಳು, ಪೊಲೀಸರು ಅಂತಹ ಹಣ, ವಸ್ತುಗಳನ್ನು ಜಪ್ತಿ ಮಾಡುತ್ತಿದ್ದಾರೆ.

ಚಿನ್ನ ಖರೀದಿಸಲೆಂದು ಕುಟುಂಬವೊಂದು ಶಿವಮೊಗ್ಗದ ಸೊರಬದಿಂದ ಶಿರಸಿಗೆ ತೆರಳುತ್ತಿದ್ದಾಗ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದಾಗ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ. ಈ ಹಿನ್ನೆಲೆಯಲಿ ನಗದು ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.

ರೇಣುಕಾ ನಾಗರಾಜ್ ಎಂಬುವವರು ಚಿನ್ನ ಖರೀದಿಸಲೆಂದು 1.5 ಲಕ್ಷ ಹಣ ತಂದಿದ್ದರು. ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದಾಗ ಅಧಿಕಾರಿಗಳು ಈ ಹಣವನ್ನು ಜಪ್ತಿ ಮಾಡಿದ್ದಾರೆ. ಸೂಕ್ತ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣ ಜಪ್ತಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular