BIG NEWS: ಲೋಕಸಭಾ ಚುನಾವಣೆ: ಏ.26ರಂದು ಮತದಾನ ಹಿನ್ನೆಲೆ; ಬೆಂಗಳೂರಿನಲ್ಲಿ ಇಂದು ಸಂಜೆಯಿಂದ 144 ಸೆಕ್ಷನ್ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 26ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಪಾರದರ್ಷಕ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಬೆಂಗಳೂರಿನಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ. ಇಂದು ಸಂಜೆ 6 ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಅಲ್ಲದೇ ಇಂದು ಸಂಜೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಬೆಂಗಳೂರಿನ 5 ಲೋಕಸಭಾ ಕ್ಷೇರಗಳಲ್ಲಿ ಹೆಚ್ಚುವರಿ ಭದ್ರತೆ ಕಲ್ಪಿಸಲಾಗುತ್ತಿದೆ. 13 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ, 40 ಸಿಎ ಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರ ನೇತೃವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read