HomeKarnatakaBIG NEWS: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಲಕ್ಷ ಹಣ ಜಪ್ತಿ

BIG NEWS: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಲಕ್ಷ ಹಣ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಕ್ರಮವಾಗಿ ಸಾಗಿಸುವ ಹಣ, ವಸ್ತುಗಳ ಮೇಲೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ನಾಯನೇಗಲಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ 6 ಲಕ್ಷ ರೂಪಾಯಿ ಹಣ ಸಿಕ್ಕಿದ್ದು, ಯಾವುದೇ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಹಣವನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಹೊಸೂರು ಚೆಕ್ ಪೋಸ್ಟ್ ನಲ್ಲಿ 2 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular