HomeLatest NewsBREAKING NEWS: ಲೋಕಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ; ಅಭ್ಯರ್ಥಿಗಳಿಗೆ ಮನೆ ಮನೆ ಪ್ರಚಾರಕ್ಕೆ ಮಾತ್ರ...

BREAKING NEWS: ಲೋಕಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ; ಅಭ್ಯರ್ಥಿಗಳಿಗೆ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.

ಏಪ್ರಿಲ್ 26ರಂದು ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಕ್ಕೆ 6  ಗಂಟೆಗೆ ತೆರೆ ಬಿದ್ದಿದೆ. ಇಂದು ಸಂಜೆ 6  ಗಂಟೆಯಿಂದ ನಾಳೆವರೆಗೂ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮಾತ್ರ ಪ್ರಚಾರ ಮಾಡಬಹುದಾಗಿದೆ. ಇನ್ನು ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿ ಬಿಟ್ಟು ತೆರಳಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 26ರಂದು ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಈ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular