HomeKarnatakaBIG NEWS: ಲೋಕಸಭಾ ಚುನಾವಣೆ: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪಕ್ಷದಿಂದ ಗಡುವು; ಇಂದು...

BIG NEWS: ಲೋಕಸಭಾ ಚುನಾವಣೆ: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪಕ್ಷದಿಂದ ಗಡುವು; ಇಂದು ಪುತ್ತಿಲ ಪರಿವಾರದ ಮಹತ್ವದ ಸಭೆ

ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರಲ್ಲಿ ಚಟುವಟಿಕೆಗಳು ಗರಿ ಗೆದರಿದ್ದು, ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಮನ ಸೆಳೆದಿದ್ದ ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆಗೆ ಗಡುವು ನೀಡಲಾಗಿದೆ.

ಬಿಜೆಪಿ ಸೇರ್ಪಡೆ ಬಗ್ಗೆ ಶೀಘ್ರವೇ ನಿರ್ಧಾರ ತಿಳಿಸಿ ಎಂದು ಹೇಳಿರುವ ಬಿಜೆಪಿ ನಾಯಕರು ಕೆಲ ಷರತ್ತುಗಳನ್ನು ವಿಧಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದೇ ಅರುಣ್ ಕುಮಾರ್ ಪುತ್ತಿಲ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಇಂದು ಅರುಣ್ ಕುಮಾರ್ ಪುತ್ತಿಲ ಸಮಾಲೋಚನಾ ಸಭೆ ಕರೆದಿದ್ದಾರೆ. ಅವರು ಹುಟ್ಟು ಹಾಕಿರುವ ಪುತ್ತಿಲ ಪರಿವಾರದ ಸಭೆ ನಡೆಯಲಿದ್ದು, ಕಾರ್ಯಕರ್ತರ ಜೊತೆ ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular