HomeKarnatakaBIG NEWS: ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ; ಮಾಜಿ...

BIG NEWS: ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ; ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಭಾರಿ ಲಾಭಿ ನಡೆಸಿದ್ದಾರೆ. ಈಶ್ವರಪ್ಪ ಪರ ಮಾಜಿ ಸಿಎಂ ಯಡಿಯೂರಪ್ಪ ಬ್ಯಾಟ್ ಬೀಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಈಶ್ವರಪ್ಪ ಅಭಿಮಾನಿಗಳು ಹಾಗೂ ಕುರುಬ ಸಮಾಜದ ಮುಖಂಡರು ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿ, ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕಾಂತೇಶ್ ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶನಿವಾರ ಈಶ್ವರಪ್ಪ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕಳುಹಿಸಿದ್ದೆ. ದೆಹಲಿಯಲ್ಲಿ ಅಮಿತ್ ಶಾ ಜೊತೆ ಚರ್ಚಿಸಲು ನನ್ನ ಜೊತೆ ಕೆ.ಎಸ್.ಈಶ್ವರಪ್ಪ ಬರಲಿ. ನಾನು ಬೇರೆ ಅಲ್ಲ, ಈಶ್ವರಪ್ಪ ಬೇರೆ ಅಲ್ಲ. ನಾನೇ ಖುದ್ದಾಗಿ ಈಶ್ವರಪ್ಪ ಪರ ನಿಲ್ಲುತ್ತೇನೆ. ಕಾಂತೇಶ್ ಗೆ ಟಿಕೆಟ್ ಕೊಡಿಸಿವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

 

For Latest News Updates, Join Our Whatsapp Community🚩
RELATED ARTICLES

Most Popular