ಬಿಜೆಪಿ ಪರ ಮತಯಾಚಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ರಾಮನಗರ: ಲೊಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ಮಧ್ಯೆ ಒಂದು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಕ್ಕೆ ಇನ್ನೊಂದು ಪಕ್ಷದವರು ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದೆ.

ಬಿಜೆಪಿ ಪರ ಮತಯಾಚಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ರಾಮನಗರ ಜಿಲ್ಲೆ ಕಗ್ಗಲೀಪುರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಹದೇ ಎಂಬುವವರ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಬಿಜೆಪಿ ಪರ ಮತ ಪ್ರಚಾರ ನಡೆಸಿದ್ದಕ್ಕೆ ಸ್ಥಳೀಯ ಪಂಚಾಯ್ತಿ ಮುಖಂಡರು ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಸದ್ಯ ಗಾಯಾಲು ಮಹಾದೇವ್ ಅವರನ್ನು ಹಾರೋಹಳ್ಳಿ ದಯಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read