HomeKarnatakaBREAKING: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

BREAKING: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ 28 ಮಹಿಳೆಯರಿಗೆ ಟಿಕೆಟ್ ಘೋಷಿಸಲಾಗಿದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು, 34 ಕೇಂದ್ರ ಸಚಿವರಿಗೆ ಸೇರಿದಂತೆ ಒಟ್ಟು 195 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರದಿಂದ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಖನೌ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಮೊದಲ ಪಟ್ಟಿಯಲ್ಲಿ 50 ವರ್ಷದೊಳಗಿನ 47 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಆದರೆ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾರೊಬ್ಬರಿಗೂ ಟಿಕೆಟ್ ಘೋಷಿಸಲಾಗಿಲ್ಲ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular