HomeKarnatakaBIG NEWS: ಮೈತ್ರಿಕೂಟದ ಮೊದಲ ಸಭೆ; ಬಿಜೆಪಿಯ ಈ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಡಲು...

BIG NEWS: ಮೈತ್ರಿಕೂಟದ ಮೊದಲ ಸಭೆ; ಬಿಜೆಪಿಯ ಈ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧಾರ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರ ಜೊತೆ ನಡೆಸಿದೆ. ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಉಪಚುನವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಬಗ್ಗೆ ತೀರ್ಮಾನಿಸಲಾಯಿತು.

ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈಗ ಉಪಚುನಾವಣೆ ನಡೆಯುತ್ತಿರುವುದರಿಂದ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಆದರೆ ಈ ಬಗ್ಗೆ ವರಿಷ್ಠರ ಭೇಟಿ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇಂದು ಎರಡೂ ಪಕ್ಷಗಳ ನಾಯಕರು ಸಭೆ ನಡೆಸಿದ್ದೇವೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಮುಂಬರುವ ಪರಿಷತ್ ಚುನಾವಣೆಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸಭೆ ಮಾಹಿತಿಯನ್ನು ಹೈಕಮಾಂಡ್ ಗೆ ತಿಳಿಸಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular