BIG NEWS: ಲೋಕಸಭಾ ಚುನಾವಣೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ಸಿ.ಪಿ.ಯೋಗೇಶ್ವರ್

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಕಸರತ್ತು ನಡೆದಿದೆ. ಆಗಲೇ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಎರಡನೇ ಹಂತದ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆದಿದೆ. ಅದರಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಇರಲಿದೆ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ನಿಲ್ಲುವ ಬಿಜೆಪಿ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರದಿಂದ ಅಶ್ವತ್ಥನಾರಾಯಣ್ ಅಥವಾ ವಿಪಕ್ಷ ನಾಯಕ ಆರ್.ಅಶೋಕ್ ಸ್ಪರ್ಧೆ ಮಾಡಬಹುದು ಎಂದು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ. ಅಶ್ವತ್ಥನಾರಾಯಣ್, ಆರ್. ಅಶೋಕ್ ಇಬ್ಬರಲ್ಲಿ ಒಬ್ಬರು ಸ್ಪರ್ಧಿಸಬಹುದು ಎಂದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read