HomeKarnatakaBIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಮಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅಚ್ಚರಿ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ವೀರೋಧಿಸಲ್ಲ. ಆದರೆ ಚುನಾವಣೆಗೆಂದು ಟಿಕೆಟ್ ಕೇಳಿಕೊಂಡು ಹೋಗಲ್ಲ ಎಂದು ಹೇಳಿದ್ದಾರೆ.

ಚಕ್ರವರ್ತಿ ಸೂಲಿಬೆಲೆಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಕೇವಲ ವದಂತಿಯಷ್ಟೇ. 2014, 2019ರ ಚುನಾವಣೆಯಲ್ಲಿಯೂ ಇಂತಹ ವದಂತಿ ಹರಡಿತ್ತು. ಈಗ 2024 ರಲ್ಲೂ ಅಂಥದ್ದೊಂದು ವದಂತಿ ಹರಡಿದೆ. ನಾನಾಗಿಯೇ ಟಿಕೆಟ್ ಕೇಳಿಕೊಂಡು ಹೋಗಲ್ಲ. ಸ್ಪರ್ಧಿಸಲೇಬೇಕು ಹಾಗೆ ಆಗಬೇಕೆಂದು ಭಗವಂತನ ಇಚ್ಛೆ ಅದು ಆಗಿಯೇ ಆಗುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular