HomeKarnatakaBIG NEWS: ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ

BIG NEWS: ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ

ಹಾಸನ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಕಸರತ್ತು ನಡೆದಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಲ್ಲಿ ಲೋಕಸಭಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಷ್ಟೊಂದು ಗೊಂದಲ ಇಲ್ಲ. ಹಾಸನದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಶೀಘ್ರವಾಗಿ ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಎಫ್ ಎಸ್ ಎಲ್ ವರದಿ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ವರದಿ ಬಂದ ತಕ್ಷಣ ಬಹಿರಂಗ ಮಾಡುತ್ತೇವೆ. ಯಾರೇ ಆಗಲಿ ಭಾರತದ ಪರ ಇಲ್ಲದವರ, ಬೇರೆ ದೇಶದ ಮೇಲೆ ನಿಷ್ಠೆ ಹೊಂದಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular