HomeKarnatakaBREAKING NEWS: ಹಾಲಿ ಸಂಸದ ಡಿ.ವಿ.ಸದಾನಂದಗೌಡಗೆ ಬಿಗ್ ಶಾಕ್; ಬಿಜೆಪಿ ಟಿಕೆಟ್ ಮಿಸ್

BREAKING NEWS: ಹಾಲಿ ಸಂಸದ ಡಿ.ವಿ.ಸದಾನಂದಗೌಡಗೆ ಬಿಗ್ ಶಾಕ್; ಬಿಜೆಪಿ ಟಿಕೆಟ್ ಮಿಸ್

ಬೆಂಗಳೂರು: ಹಾಲಿ ಸಂಸದ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ಮಾಜಿ ಸಿಎಂ ಡಿ.ವಿ.ಸದಾನಂದಗೌಡರಿಗೆ ಈಬಾರಿ ಲೋಕಸಭಾ ಟಿಕೆಟ್ ಮಿಸ್ ಆಗಿದೆ. ಈ ಬಗ್ಗೆ ಸದಾನಂದಗೌಡರಿಗೆ ಬಿಜೆಪಿ ಹೈಕಮಾಂಡ್ ದೂರವಾಣಿ ಮೂಲಕ ಮಾಹಿತಿ ರವಾನಿಸಿದೆ. ಈ ಬಾರಿ ಅಭ್ಯರ್ಥಿ ಬದಲಾವಣೆ ಮಾಡುತ್ತಿರುವುದಾಗಿ ಹೈಕಮಾಂಡ್ ತಿಳಿಸಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಈಬಾರಿಯೂ ಸದಾನಂದಗೌಡ ತೀವ್ರ ಕಸರತ್ತು ನಡೆಸಿದ್ದರು. ಆದರೆ ಕೊನೇಕ್ಷಣದಲ್ಲಿ ಅಭ್ಯರ್ಥಿ ಬದಲಾವಣೆ ಮಾಡುವುದಾಗಿ ಬಿಜೆಪಿ ವರಿಷ್ಠರು ಸಂದೇಶ ರವಾನಿಸುವ ಮೂಲಕ ಹಾಲಿ ಸಂಸದರಿಗೆ ಶಾಕ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈಕಮಾಂಡ್ ಮಾಹಿತಿ ಬೆನ್ನಲ್ಲೇ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಬೆಗಳೂರು ಉತ್ತರ ಕ್ಷೇತ್ರದ ಮತದಾರರಿಗೆ ಧನ್ಯವಾದ. ಶಕ್ತಿ ಮೀರಿ ನಿಮ್ಮ ಸೇವೆ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದು ಟ್ವೀಟ್ ಮೂಲಕ ವಿದಯದ ಸಂದೇಶ ಬರೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular