HomeIndiaBREAKING NEWS: ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ; ಇಲ್ಲಿದೆ ಸಂಪೂರ್ಣ ಮಾಹಿತಿ

BREAKING NEWS: ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 19 ಮೊದಲ ಹಂತ, ಏಪ್ರಿಲ್ 26 2ನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13 ನಾಲ್ಕನೇ ಹಂತ, ಮೇ 20ರಂದು 5ನೇ ಹಂತ, ಮೇ 25ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನು ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಎಂಬ ಎರಡು ವಿಭಾಗಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ ಮೇ 7ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 26ರಂದು ಕರ್ನಾಟಕದ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಮೇ 7ರಂದು ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಚಿತ್ರದುರ್ಗ,ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ,ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಮತದಾನ ನಡೆಯಲಿದೆ.

ಮೇ 7ರಂದು 2ನೇ ಹಂತದಲ್ಲಿ ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರ್ಗಿ, ಬೀದರ್, ಹುಬ್ಬಳ್ಳಿ-ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರದಲ್ಲಿ ಮತದಾನ ನಡೆಯಲಿದೆ.

ಲೋಕಸಭಾ ಚುನವಣೆಯ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular