BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ಇತ್ತೀಚೆಗೆ ಬಿಜೆಪಿಗೆ ವಾಪಾಸ್ ಆಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೋಕಸಭಾ ಚುನಾವಣಾ ಟಿಕೆಟ್ ಗಾಗಿ ಭಾರಿ ಕಸರತ್ತು ನಡೆಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಶೆಟ್ಟರ್ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ.

ಈ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಬೆಳಗಾವಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾ ಮಾಡಿಲ್ಲ. ಬೆಳಗಾವಿ ಕ್ಷೇತ್ರಕ್ಕೆ ನನ್ನ ಹೆಸರು ಯಾವ ಉದ್ದೇಶಕ್ಕೆ ಕೇಳಿಬರುತ್ತಿದೆ ಗೊತ್ತಿಲ್ಲ ಎಂದಿದ್ದಾರೆ.

ಇಂದು ನಡೆದ ಬಿಜೆಪಿ ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read