HomeKarnatakaBIG NEWS: ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ; ಆಪ್ತರು, ಬೆಂಬಲಿಗರ ಸಭೆ ಕರೆದ...

BIG NEWS: ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ; ಆಪ್ತರು, ಬೆಂಬಲಿಗರ ಸಭೆ ಕರೆದ ಮಾಜಿ ಸಚಿವ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಹತ್ವದ ಸಭೆ ಕರೆದಿದ್ದಾರೆ.

ಪುತ್ರನಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರ ವಿರುದ್ಧ ಅಸಮಾಧಾನಗೊಂಡಿರುವ ಕೆ.ಎಸ್.ಈಶ್ವರಪ್ಪ, ಆಪ್ತರು, ಬೆಂಬಲಿಗರು, ಅಭಿಮಾನಿಗಳ ಸಭೆ ಕರೆದಿದ್ದಾರೆ. ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಿದ್ದು, ಸಭೆ ಬಳಿಕ ಮುಂದಿನ ನಿಲುವು ಪ್ರಕಟಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular