BIG NEWS: ಮಾರ್ಚ್ 13, 14ರಂದು ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ; ಡಿಸಿಎಂ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭವಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್, ಮಾರ್ಚ್ 13, 14ರಂದು ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನೂತನ ಎಂಎಲ್ ಸಿ ಸಿ.ಪುಟ್ಟಣ್ಣ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮಗೆ ಸಮಯವಿಲ್ಲ. ಕೇಂದ್ರ ಸರ್ಕಾರದವರು ತರಾತುರಿಯಲ್ಲಿ ಉದ್ಘಾಟನಾ ಕ್ರಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಚುನಾವಣೆ ಘೋಷಣೆಗೆ ಮೂರ್ನಾಲ್ಕು ದಿನಗಳು ಬಾಕಿ ಇವೆ ಎಂದರು.

ಎಂಎಲ್ ಸಿಯಾಗಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಇದು ಶಿಕ್ಷಕರ ಗೆಲುವು ಪುಟ್ಟಣ್ಣ ಗೆಲುವು ಅಲ್ಲ. ನೀವು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸೋಲನುಭವಿಸಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read