HomeKarnatakaBIG NEWS: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಳ್ಕರ್ ಪರ ಹಣ ಹಂಚಿಕೆ ಆರೋಪ; ಐವರು ಅರೆಸ್ಟ್

BIG NEWS: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಳ್ಕರ್ ಪರ ಹಣ ಹಂಚಿಕೆ ಆರೋಪ; ಐವರು ಅರೆಸ್ಟ್

ಬೆಳಗಾವಿ: ಬೇಳಗಾವಿ ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಮಾಡಿದ ಆರೋಪದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ 1000 ರೂಪಾಯಿ ಹಣ ಹಂಚುತ್ತಿದ್ದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬೆಂಬಲಿಗರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕಾಗಮಿಸುತ್ತಿದಂತೆ ಓಡಿ ಹೋಗಲು ಯತ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿಯಲಾಗಿದೆ. ಮತದಾರರಿಗೆ ಹಂಚಲು ತಂದಿದ್ದ 20 ಲಕ್ಷ ಹಣದ ಸಮೇತ ಐವರನ್ನು ಹಿಡಿದು ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ. ಮಹಾಂತೇಶ್ ಕಡಾಡಿ, ಭದ್ರಾವತಿ ಮೂಲದ ಇಬ್ಬರು ಯುವಕರು, ಹರ್ಷಾ ಶುಗರ್ಸ್ ಕಾರ್ಖಾನೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular