HomeKarnatakaBIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ ಪ್ರಕಾಶ್ ಹುಕ್ಕೇರಿ

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಈ ನಡುವೆ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ತೀವ್ರ ಕುತೂಹಲ ಮೂಡಿಸಿದೆ.

ಈ ಮಧ್ಯೆ ನಾನು ಹಾಗೂ ನನ್ನ ಪುತ್ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಚಿಕ್ಕೋಡಿ ಟಿಕೆಟ್ ಕುರುಬ ಸಮುದಾಯಕ್ಕೆ ನೀಡಿದರೆ ಗೆಲ್ಲಿಸಿಕೊಂಡು ಬರುತ್ತೇವೆ. 2014ರಲ್ಲಿ ಮಂತ್ರಿ ಆಗಿದ್ದರೂ ಮುಖ್ಯಂತ್ರಿಗಳ ಸೂಚನೆಯಂತೆ ಲೋಕಸಭೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದೆ. ಆಗ ಗಣೇಶ್ ಹುಕ್ಕೆರಿಯನ್ನು ಮಂತ್ರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಈಗ ಪುತ್ರ ಗಣೇಶ್ ಶಾಸಕನಾಗಿ ಆಯ್ಕೆಯಾದರೂ ಮಂತ್ರಿ ಮಾಡಿಲ್ಲ. ನಾನಾಗಲಿ ನನ್ನ ಮಗನಾಗಲಿ ಇನ್ನೂ ಮಂತ್ರಿ ಸ್ಥಾನ ಕೇಳಲ್ಲ, ಕೇಳುವುದು ಇಲ್ಲ. ಈಗ ಲೋಕಸಭೆಗೆ ಸ್ಪರ್ಧಿಸುವಂತೆ ಒತ್ತಡ ಬರುತ್ತಿದೆ. ನಾನು ಸ್ಪರ್ಧೆ ಮಾಡಿದ್ರೆ ಚಿಕ್ಕೋಡಿ ಗೆಲ್ಲುತ್ತೇವೆ ಎಂಬುದು ಲೆಕ್ಕಾಚಾರವಿದೆ. ಆದರೆ ನಾನು ಯಾವುದೇ ಕಾರಣಕ್ಕೂ ಲೋಕಸಭೆಗೆ ಸ್ಪರ್ಧಿಸಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular