BREAKING NEWS: ಲೋಕಸಭಾ ಚುನಾವಣೆ: 85 ವರ್ಷ ಮೇಲ್ಪಟ್ಟವರು, ದಿವ್ಯಾಂಗರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಆಯೋಗ ಸಜ್ಜಾಗಿದ್ದು, ಚುನಾವಣೆಗಳು ನಮಗೆ ಪರೀಕ್ಷೆ ಇದ್ದಂತೆ ಮುಕ್ತ ಮತ್ತು ನ್ಯಾಯಸಮ್ಮತ ಪಾರದರ್ಶಕ ಮತದಾನ ನಮ್ಮ ಉದ್ದೇಶವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ದೆಹಲಿಯ ವಿಜ್ಞನಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್ 17ನೇ ಲೋಕಸಭೆ ಅವಧಿ ಜೂನ್ 16ಕ್ಕೆ ಮುಕ್ತಾಯವಾಗಲಿದೆ. ಈ ಬಾರಿ ದೇಶದಲ್ಲಿ 1.8 ಕೋಟಿ ಜನರು ಮೊದಲ ಬಾರಿ ಮತದಾನ ಮಾಡಲಿದ್ದಾರೆ ಎಂದರು.

ಮತದಾನದ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಫ್ ಡೆಸ್ಕ್ , ವಿದ್ಯುತ್ ಸೇರಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. 85 ವರ್ಷ ಮೇಲ್ಪಟ್ಟವರಿಗೆ, ಶೇ.40ರಷ್ಟು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುವುದು.

ಇನ್ನು ಮತದಾನ ಕೇಂದ್ರಗಳಲ್ಲಿ ವ್ಹೀಲ್ ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ ಎಂದು ತಿಳಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read