HomeKarnatakaBIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ಈ ಬಾರಿ ಲೋಕಸಭಾ ಚುನವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಲ್ಲ, ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದರು.

ಬೆಳಗಾವಿ, ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿಯೂ ನಾನಾಗಲಿ, ನನ್ನ ಕುಟುಂಬದಿಂದಾಗಲಿ ಯಾರೂ ಸ್ಪರ್ಧಿಸಲ್ಲ. ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತದೆ ನೋಡೋಣ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular