HomeKarnatakaBIG NEWS: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಾಸ್ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

BIG NEWS: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಾಸ್ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ವಾಪಾಸ್ ಕರೆತರಲು ಯತ್ನಿಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೇ ಕಳೆದೊಂದು ವಾರದಿಂದ ಜಗದೀಶ್ ಶೆಟ್ಟರ್ ನಡೆ ಕೂಡ ತೀವ್ರ ಕುತೂಹಲ ಮೂಡಿಸಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗುತ್ತಾರೆ ಎಂಬ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯಲ್ಲಿ ನನಗೆ ಅವಮಾನವಾಗಿದೆ. ಹಾಗಾಗಿ ಮತ್ತೆ ಬಿಜೆಪಿಗೆ ಹೋಗಲ್ಲ ಎಂದು ಶೆಟ್ಟರ್ ಈಗಾಗಲೇ ಹೇಳಿದ್ದಾರೆ ಎಂದರು.

ಇನ್ನು ನಿಗಮ-ಮಂಡಳಿ ನೇಮಕಾತಿ ವಿಚಾರವಾಗಿ ಹೈಕಮಾಂಡ್ ಒಪ್ಪಿಗೆ ನೀಡಿದ ಬಳಿಕ ನಿಗಮ-ಮಂಡಳಿ ಪಟ್ಟಿ ಬಿಡುಗಡೆಯಾಗಲಿದೆ. ನಿಗಮ-ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ಪಟ್ಟಿ ಈಗಾಗಲೇ ವರಿಷ್ಠರಿಗೆ ನೀಡಲಾಗಿದೆ. ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಕೂದಲೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular