HomeIndiaBREAKING NEWS: ಲೋಕಸಭಾ ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ; ಸೂರತ್ ಬಿಜೆಪಿ ಅಭ್ಯರ್ಥಿಗೆ ಜಯ

BREAKING NEWS: ಲೋಕಸಭಾ ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ; ಸೂರತ್ ಬಿಜೆಪಿ ಅಭ್ಯರ್ಥಿಗೆ ಜಯ

ಅಹಮದಾಬಾದ್: ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಗುಜರಾತ್ ನಲ್ಲಿ ಖಾತೆ ತೆರೆದಿದೆ. ಗುಜರಾತ್ ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಗೆಲುವು ಸಾಧಿಸಿದ್ದಾರೆ.

ಗುಜರಾತ್ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿರುವ ಮುಕೇಶ್ ದಲಾಲ್ ಸೂರತ್ ಕ್ಷೇತ್ರದಿಂದ ಲೋಕಸಭಾ ಕಣಕ್ಕಿಳಿದಿದ್ದರು. ಆದರೆ ಸೂರತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಇನ್ನು ಬಿಎಸ್ ಪಿ ಸೇರಿ 8 ಅಭ್ಯರ್ಥಿಗಳು ನಾಅಪತ್ರ ಹಿಂಪಡೆದಿದ್ದರು. ಈ ಹಿನ್ನೆಲೆಯಲ್ಲಿ 2024ರ ಚುನಾವಣೆಯಲ್ಲಿ ಸೂರತ್ ಕ್ಷೇತ್ರದಲ್ಲಿ ಮತದಾನ ನಡೆಯುವುದಿಲ್ಲ.

ಈ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಎದುರಾಳಿಯಿಲ್ಲದೇ, ಚುನಾವಣೆಯಿಲ್ಲದೇ ಜಯಗಳಿಸಿದಂತಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular