BIG NEWS: ಮತದಾನ ಜಾಗೃತಿ: ರಮೇಶ್ ಅರವಿಂದ್, ನೀತು ವನಜಾಕ್ಷಿ ಸೇರಿದಂತೆ ನಾಲ್ವರು ರಾಯಭಾರಿಗಳಾಗಿ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳ ನಾಲ್ವರು ಗಣ್ಯರನ್ನು ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರಿನ ಜನತೆಯಲ್ಲಿ ಮತದಾನ ಮಾಡುವ ಬಗ್ಗೆ ಜಾಗೃತಿ, ಅರಿವು ಮೂಡಿಸುವ ನಿಟ್ಟಿನಲ್ಲಿ ಚುನಾವಣಾ ಹಬ್ಬದಲ್ಲಿ ಎಲ್ಲರೂ ಭಾಗವಹಿಸುವಂತೆ ಮತದಾರರಲ್ಲಿ ಉತ್ಸಾಹ ತುಂಬುವ ನಿಟ್ಟಿನಲ್ಲಿ ನಾಲ್ವರು ಪ್ರಮುಖರನ್ನು ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ನಮ್ಮ ಬೆಂಗಳೂರು ಐಕಾನ್ಸ್ ಹೆಸರಿನಲ್ಲಿ ನಟ, ನಿರ್ದೇಶಕ ರಮೇಶ್ ಅರವಿಂದ್, ರೂಪದರ್ಶಿ, ಬಿಗ್ ಬಾಸ್ ಖ್ಯಾತಿಯ ನೀತು ವನಜಾಕ್ಷಿ, ಬ್ಯಾಡ್ಮಿಟನ್ ಆಟಗಾರ ಅನುಪ್ ಶ್ರೀಧರ್ ಹಾಗೂ ಟೇಬಲ್ ಟೆನ್ನಿಸ್ ಆಟಗಾರ್ತಿ ಅರ್ಚನಾ ಜಿ.ಕಾಮತ್ ಅವರನ್ನು ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read