HomeKarnatakaBREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದಿದ್ದ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ.

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದನ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತಿರುವವರಿಗಷ್ಟೇ ಮತದಾನಕ್ಕೆ ಅವಕಾಶ ನೀಡಲಾಗಿದೆ.

ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಈ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಜೆ 5ಗಂಟೆಯವರೆಗೆ ಶೇ.63.90ರಷ್ಟು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂದು ತಿಳಿದುಬಂದಿದೆ.

ಮೇ 7ರಂದು ರಾಜ್ಯದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular